ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

347

ಪ್ರಜಾಸ್ತ್ರ ಸುದ್ದಿ

ಕೊಡಗು: ಇಲ್ಲಿನ ಮೆಡಿಕಲ್ ಕಾಲೇಜು ವಿದ್ಯಾರ್ಥಿಯೊಬ್ಬ ವಸತಿ ನಿಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪ್ರದೀಪ್(23) ಮೃತ ವಿದ್ಯಾರ್ಥಿಯಾಗಿದ್ದಾನೆ. ಬೀದರ್ ಜಿಲ್ಲೆ ಔರಾದ್ ಮೂಲದ ವಿದ್ಯಾರ್ಥಿ ದ್ವಿತೀಯ ವರ್ಷದ ಎಂಬಿಬಿಎಸ್ ಓದುತ್ತಿದ್ದ.

ವಿದ್ಯಾರ್ಥಿಯ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!