ಖ್ಯಾತ ನಟಿ ಮೀನಾ ಪತಿ ನಿಧನ

505

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಸೌಥ್ ಸಿನಿ ದುನಿಯಾದ ಖ್ಯಾತ ನಟಿ ಮೀನಾ ಅವರ ಪತಿ ವಿದ್ಯಾಸಾಗರ ಅವರು ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಚೆನ್ನೈ ಖಾಸಗಿ ಆಸ್ಪತ್ರೆಗೆ ಸೋಮವಾರ ದಾಖಲಿಸಲಾಗಿತ್ತು. ಆದರೆ, ಬುಧವಾರ ನಿಧನರಾಗಿದ್ದಾರೆ. ವಿದ್ಯಾಸಾಗರ ನಿಧನಕ್ಕೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇದು ನಿಜಕ್ಕೂ ಹೃದಯ ಒಡೆದು ಹೋಗುವ ವಿಷಯ ಎಂದು ನಟಿ, ರಾಜಕಾರಣಿ ಖುಷ್ಬು ಸುಂದರ್ ಟ್ವೀಟ್ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!