ಮೇಕೆದಾಟು ಪಾದಯಾತ್ರೆ: ಮಧ್ಯಾಹ್ನ ಕಾಂಗ್ರೆಸ್ ಸಭೆ

213

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ತರುವಂತೆ ಆಗ್ರಹಿಸಿ ಕಾಂಗ್ರೆಸ್ ನಾಳೆಯಿಂದ ಪಾದಯಾತ್ರೆ ಹಮ್ಮಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಕೈ ನಾಯಕರು ಇಂದು ಮಧ್ಯಾಹ್ನ ಸಭೆ ಕರೆದಿದ್ದಾರೆ. ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೆ ತಂದಿದೆ. ಆದರೂ, ಕಾಂಗ್ರೆಸ್ ಪಾದಯಾತ್ರೆ ಮಾಡುವುದಾಗಿ ಹೇಳಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಶಾಸಕರು, ವಿಧಾನ ಪರಿಷತ್ ಸದಸ್ಯರು, ಲೋಕಸಭೆ, ರಾಜ್ಯಸಭೆ ಸದಸ್ಯರು ಹಾಗೂ ಪಾದಯಾತ್ರೆಗೆ ಬೆಂಬಲ ನೀಡುತ್ತಿರುವ ನಾಯಕರಿಗೆಲ್ಲ ಪತ್ರ ಬರೆಯಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ರಾಮನಗರದ ನಿವಾಸದಲ್ಲಿ ಸಭೆ ನಡೆಯಲಿದೆ. ಈ ವೇಳೆ ಪಾದಯಾತ್ರೆಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!