ಮೇಕೆದಾಟು ಯೋಜನೆ ಜಾರಿಗಾಗಿ ಪ್ರತಿಭಟನೆ

256

ಪ್ರಜಾಸ್ತ್ರ ಸುದ್ದಿ

ಮೈಸೂರು: ಮೇಕೆದಾಟು ಆಣೆಕಟ್ಟು ಯೋಜನೆ ಜಾರಿಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ರು. ಈ ಯೋಜನೆಗೆ ವಿರೋಧ ವ್ಯಕ್ತಪಡಿಸ್ತಿರುವ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ವಿರುದ್ಧ ಧಿಕ್ಕಾರ ಕೂಗಿದ್ರು.

ಈ ಯೋಜನೆ ಸಂಬಂಧ 2013ರಲ್ಲೇ ಕೇಂದ್ರಕ್ಕೆ ವರದಿ ಸಲ್ಲಿಸಲಾಗಿದೆ. ಆಣೆಕಟ್ಟು ನಿರ್ಮಾಣವಾದ್ರೆ 66 ಟಿಎಂಸಿ ನೀರು ಸಂಗ್ರಹಿಸಬಹುದು. ಇದರಿಂದ 12 ಸಾವಿರ ಎಕರೆ ಜಮೀನು ಮುಳುಗಡೆಯಾಗಲಿದೆ. ಆದ್ರೂ ನಾವು ಬೆಂಬಲಿಸುತ್ತೇವೆ ಎಂದರು. ಇನ್ನು ಈ ಯೋಜನೆಯಿಂದ 440 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಬಹುದು. ಹೀಗಾಗಿ ಮೇಕೆದಾಟು ಯೋಜನೆ ಜಾರಿಗೆ ಬರಲೇಬೇಕು ಎಂದು ಆಗ್ರಹಿಸಿದ್ರು.




Leave a Reply

Your email address will not be published. Required fields are marked *

error: Content is protected !!