ಮೆಟ್ರೋ ಪಿಲ್ಲರ್ ಬಿದ್ದು ತಾಯಿ, ಮಗು ಸಾವು: 5 ತಿಂಗಳ ಬಳಿಕ ಚಾರ್ಜ್ ಶೀಟ್

198

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ ಜನವರಿ 10ರಂದು ಚಲಿಸುತ್ತಿದ್ದ ಬೈಕ್ ಮೇಲೆ ಮೆಟ್ರೋ ಪಿಲ್ಲರ್ ಬಿದ್ದು ತಾಯಿ ಹಾಗೂ ಎರಡೂವರೆ ವರ್ಷದ ಮಗು ಮೃತಪಟ್ಟ ಘಟನೆ ಸಂಬಂಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 5 ತಿಂಗಳ ಬಳಿಕ 1,100 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು 11 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ಎಫ್ಎಸ್ಎಲ್ ವರದಿ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿದ್ದರು. ಅಧಿಕಾರಿಗಳ ಲೋಪ, ಕಾಮಗಾರಿ ವೇಳೆ ಸುರಕ್ಷತೆ ಬಗ್ಗೆ ತೆಗೆದುಕೊಳ್ಳದ ಕ್ರಮಗಳ ಕುರಿತು ಉಲ್ಲೇಖಿಸಲಾಗಿದೆ. ಮೆಟ್ರೋ ನಿರ್ಮಾಣ ಸಂಸ್ಥೆಯ ಇಂಜಿನಿಯರ್, ಬಿಎಂಆರ್ ಸಿಎಲ್ ಇಂಜಿನಿಯರ್ಸ್ ಸೇರಿ 11 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ಗದಗ ಮೂಲದ ಲೋಹಿತ್ ಹಾಗೂ ತೇಜಸ್ವಿನಿ ದಂಪತಿ ಕಳೆದ 10 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ಮಕ್ಕಳನ್ನು ಬೇಬಿ ಸಿಟ್ಟಿಂಗ್ ಗೆ ಬಿಟ್ಟು ಪತ್ನಿ ಹಾಗೂ ತಾವು ಕೆಲಸಕ್ಕೆ ಕಂಪನಿ ಕಡೆ ಹೋಗುತ್ತಿದ್ದರು. ಆದರೆ, ದುರಾದೃಷ್ಟವಶಾತ್ ಮೆಟ್ರೋ ಪಿಲ್ಲರ್ ಇವರು ಚೆಲಿಸುತ್ತಿದ್ದ ಬೈಕ್ ಮೇಲೆ ಬಿದ್ದಿದೆ. ಹೀಗಾಗಿ ಪತಿ, ಪತ್ನಿ, ಇಬ್ಬರು ಮಕ್ಕಳು ಗಾಯಗೊಂಡರು.

ಇವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಪತ್ನಿ ತೇಜಸ್ವಿನಿ, ಎರಡೂವರೆ ವರ್ಷದ ಮಗು ಮೃತಪಟ್ಟಿತು. ಲೋಹಿತ್ ಹಾಗೂ ಇನ್ನೊಬ್ಬಳು ಮಗಳಿಗೆ ಚಿಕಿತ್ಸೆ ನೀಡಲಾಯಿತು. ಈ ಘಟನೆ 5 ತಿಂಗಳ ಹಿಂದೆ ನಡೆದಿದೆ. ಇದೀಗ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.




Leave a Reply

Your email address will not be published. Required fields are marked *

error: Content is protected !!