ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬೈಕ್ ನಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ಹೊರಟ್ಟಿದ್ದಾಗ ಕಾಮಗಾರಿ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ತಾಯಿ, ಮಗು ಮೃತಪಟ್ಟ ಘಟನೆ ನಡೆದಿದೆ. ಎಚ್ ಬಿಆರ್ ಲೇಔಟ್ ಹತ್ತಿರ ಮೆಟ್ರೋ ಕಾಮಗಾರಿ ನಡೆಯುತ್ತಿದೆ.
ಕಬ್ಬಿಣದ ಪಿಲ್ಲರ್ ಗಳು ಬಿದ್ದು ತಾಯಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಯಿತು. ಚಿಕಿತ್ಸೆ ಫಲಿಸದೆ ತೇಜಸ್ವಿನಿ(28) ಹಾಗೂ ಮಗ ವಿಹಾನ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.