ಲೋಕಲ್ ಫೈಟ್: ಮಂಗಳೂರು, ಶಿವಮೊಗ್ಗದಲ್ಲಿ ಕಮಲ ಕಿಂಗ್

309

ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್ ಗಳಲ್ಲಿ ಪ್ರಕಟವಾಗಿರುವ ಫಲಿತಾಂಶದಲ್ಲಿ 20ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಈ ಮೂಲಕ ಗೆಲುವಿನ ಓಟವನ್ನ ಮುಂದುವರೆಸಿದೆ. ಕಾಂಗ್ರೆಸ್ 9 ವಾರ್ಡ್ ಗಳಲ್ಲಿ ಗೆಲುವು ದಾಖಲಿಸಿದೆ.

ಇತ್ತ ಸಿಎಂ ತವರೂರು ಶಿವಮೊಗ್ಗದಲ್ಲಿಯೂ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಪಟ್ಟಣ ಪಂಚಾಯ್ತಿಯ 11 ವಾರ್ಡ್ ಗಳಲ್ಲಿ 9ರಲ್ಲಿ ಬಿಜೆಪಿ ಗೆಲುವು ದಾಖಲಿಸುವ ಮೂಲಕ ಕಮಲ ಕಿಲಕಿಲ ಅಂತಿದೆ. ಜೋಗ್ ಕಾರ್ಗಲ್ ಪಟ್ಟಣ ಪಂಚಾಯ್ತಿಯಲ್ಲಿ ಬಿಜೆಪಿ ಮೊದಲ ಬಾರಿಗೆ ಗೆದ್ದಿದೆ. ಕೇವಲ ಒಂದು ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್ ಸೋಲು ಅನುಭವಿಸಿದೆ. ಜೆಡಿಎಸ್ ಯಾವುದೇ ಖಾತೆ ತೆರದಿಲ್ಲ.




Leave a Reply

Your email address will not be published. Required fields are marked *

error: Content is protected !!