ಅಕ್ಟೋಬರ್ 2ಕ್ಕೆ ಮಂತ್ರಿಗಿರಿಗೆ ರಾಜೀನಾಮೆ?

429

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಅವರು ಅಕ್ಟೋಬರ್ 2ಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗ್ತಿದೆ. ಇದೀಗ ಇವರನ್ನ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆಯ್ಕೆ ಮಾಡಲಾಗಿದೆ. ಹೀಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗ್ತಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು, ಸಚಿವ ಸಿ.ಟಿ ರವಿ ಅವರನ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿ ಆಯ್ಕೆ ಮಾಡಿದ್ದಾರೆ. ಬಿಜೆಪಿಯಲ್ಲಿ ಒಬ್ಬ ವ್ಯಕ್ತಿಗೆ ಎರಡು ಹುದ್ದೆ ಇಲ್ಲ ಎನ್ನುವ ಕಾರಣಕ್ಕೆ ಸಿ.ಟಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗ್ತಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕಾರದ ದಿನಾಂಕ ಘೋಷಣೆಯಾದ್ಮೇಲೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!