ಇನ್ನೂ ಹಲವರ ಸಿಡಿ ಇವೆ: ದಿನೇಶ ಕಲ್ಲಳ್ಳಿ

319

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸೆಕ್ಸ್ ಸಿಡಿ ವಿಚಾರ ಇದೀಗ ರಾಜ್ಯ ರಾಜಕಾರಣದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿದೆ. ರಾಜ್ಯ ಹಾಗೂ ಕೇಂದ್ರ ನಾಯಕರು ಈ ಪ್ರಕರಣದಿಂದ ತಲೆ ತಗ್ಗಿಸುವಂತಾಗಿದೆ. ಇದನ್ನ ಬಿಡುಗಡೆ ಮಾಡಿರುವ ಸಾಮಾಜಿಕ ಕಾರ್ಯಕರ್ತ ದಿನೇಶ ಕಲ್ಲಳ್ಳಿ ಇದೀಗ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಸಚಿವ ರಮೇಶ ಜಾರಕಿಹೊಳಿ ಅವರ ಸಿಡಿ ಮಾತ್ರವಲ್ಲ. ಇನ್ನೂ ಹಲವರು ಸಿಡಿಗಳು ಇವೆ ಎಂದು ಹೇಳಿದ್ದಾರೆ. ಸೂಕ್ತ ವೇದಿಕೆಗಳಲ್ಲಿ ಅವುಗಳನ್ನ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತೊಂದು ವಿಡಿಯೋ ಬಿಡುತ್ತೇನೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!