ಬ್ರೇಕಿಂಗ್ ನ್ಯೂಸ್
Search

ಏಕೈಕ ಮಹಿಳಾ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರಾಜಕೀಯ ಹಾದಿ

128

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಶನಿವಾರ ಮುಂಜಾನೆ 11.30ರ ಸಮಯದಲ್ಲಿ ರಾಜಭವನದ ಗ್ಲಾಸ್ ಹೌಸ್ ನಲ್ಲಿ ನಡೆದ ಸಚಿವರ ಪ್ರಮಾಣ ವಚನ ಸಮಾರಂಭದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಮಾಣ ವಚನ ಸ್ವೀಕರಿಸಿದರು.

24 ನೂತನ ಸಚಿವರ ಲಿಸ್ಟ್ ನಲ್ಲಿರುವ ಏಕೈಕ ಮಹಿಳಾ ಸಚಿವೆ ಇವರು. ಈ ಬಾರಿ ಬೆಳಗಾವಿಯ 18 ಕ್ಷೇತ್ರಗಳಲ್ಲಿ 11ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಇದರಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪಾತ್ರವೂ ಇದೆ. ಇದನ್ನು ಗಮನಿಸಿದ ಕಾಂಗ್ರೆಸ್ ಹೈಕಮಾಂಡ್ 2ನೇ ಬಾರಿಗೆ ಶಾಸಕಿಯಾದ ಇವರಿಗೆ ಸಚಿವ ಸ್ಥಾನ ನೀಡಿದೆ.

48 ವರ್ಷದ ಲಕ್ಷ್ಮಿ ಹೆಬ್ಬಾಳ್ಕರ್ ಎಂ.ಎ ಪದವಿಧರರು. ಲಿಂಗಾಯತ ಸಮುದಾಯಕ್ಕೆ ಸೇರಿದವರು. 2018ರಲ್ಲಿ ಮೊದಲ ಬಾರಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಗೆದ್ದು ಶಾಸಕಿಯಾದರು. 2013ರ ವಿಧಾನಸಭೆ ಹಾಗೂ 2014ರ ಲೋಕಸಭೆಯಲ್ಲಿ ಸೋಲು ಅನುಭವಿಸಿದ್ದರು. ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆಯಾಗಿ, ಎಐಸಿಸಿ ಸದಸ್ಯೆಯಾಗಿ ಕೆಲಸ ಮಾಡಿದ ಅನುಭವ ಇದೆ. ಈಗ ಸಿದ್ದರಾಮಯ್ಯ ಸಚಿವ ಸಂಪುಟದ ಏಕೈಕ ಮಹಿಳಾ ಸಚಿವೆ ಇವರು.




Leave a Reply

Your email address will not be published. Required fields are marked *

error: Content is protected !!