ಕೋವಿಡ್ ಆಸ್ಪತ್ರೆಗಳಿಗೆ ಸಚಿವ ಜಗದೀಶ ಶಟ್ಟರ್ ಭೇಟಿ

309

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರು, ಹುಬ್ಬಳ್ಳಿ ಸಂಜೀವಿನಿ ಹಾಗೂ ಹೆಗ್ಗೇರಿ ಆಯುರ್ವೇದ ಕಾಲೇಜಿನಲ್ಲಿ ವ್ಯವಸ್ಥೆಗೊಳಿಸಿರುವ ಕೋವಿಡ್ 19 ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಿಮ್ಸ್ ನ ಕೋವಿಡ್ 19 ಆಸ್ಪತ್ರೆಯ ಜೊತೆಗೆ ಕಡಿಮೆ ಲಕ್ಷಣಗಳುಳ್ಳ ರೋಗಿಗಳ ಚಿಕಿತ್ಸೆಗೆ ಆರ್ಯವೇದ ಕಾಲೇಜುಗಳಲ್ಲಿ ಕೋವಿಡ್ ಆಸ್ಪತ್ರೆಗಳನ್ನು ವ್ಯವಸ್ಥೆಗೊಳಿಸಲಾಗಿದೆ. ಕಿಮ್ಸ್ ನಲ್ಲಿ 35 ವೆಂಟಿಲೇಟರ್ ಹಾಗೂ‌ 250 ಬೆಡ್ ಗಳಿವೆ. ಕೊವೀಡ್ ನಿಂದ ತೀವ್ರವಾಗಿ ಬಳಲುತ್ತಿರುವ ರೋಗಿಗಳಿಗೆ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುವುದು‌ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಸಚಿವರಿಗೆ ತಿಳಿಸಿದರು.

ಈ ವೇಳೆ ಶಾಸಕರಾದ ಅರವಿಂದ ಬೆಲ್ಲದ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮೊಹನ ಲಿಂಬಿಕಾಯಿ, ಜಿಲ್ಲಾ ‌ಆರೋಗ್ಯ ಅಧಿಕಾರಿ ಯಶವಂತ ಮದೀನಕರ್, ಹುಬ್ಬಳ್ಳಿ ತಹಶೀಲ್ದಾರ್ ಶಶಿಧರ ಮಾಡ್ಯಾಳ, ಆಯುರ್ವೇದ ಕಾಲೇಜಿನ ಪ್ರಾಂಶುಪಾಲ‌ ಡಾ.ಬನ್ನಿಗೋಳ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.




Leave a Reply

Your email address will not be published. Required fields are marked *

error: Content is protected !!