ಕರವೇ ಕಾರ್ಯಕರ್ತರು ಶರಣಾದ್ರು ಮುಂದುವರೆದ ವೈದ್ಯರ ಪ್ರತಿಭಟನೆ

363

ಬೆಂಗಳೂರು: ನಗರದ ಮಿಂಟೋ ಆಸ್ಪತ್ರೆ ವೈದ್ಯರು ನಡೆಸ್ತಿರುವ ಪ್ರತಭಟನೆ ಇನ್ನು ಮುಂದುವರೆದಿದೆ. ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ವೈದ್ಯರು ಮೇಲೆ ಹಲ್ಲೆ ಮಾಡಿರುವ ಪ್ರಕರಣ ಸಂಬಂಧ, ಕಿರಿಯ ವೈದ್ಯರು ಪ್ರತಿಭಟನೆ ಮುಂದುವರೆಸಿದ್ದಾರೆ.

ಒಪಿಡಿ(ಹೊರ ರೋಗಿ ವಿಭಾಗ) ಬಂದ್ ಮಾಡಿ ಪ್ರತಿಭಟನೆ ಮುಂದುವರೆಸಿದ್ದಾರೆ. ಡಿಸಿಎಂ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಅಶ್ವಥನಾರಾಯಣ ಹಾಗೂ ಪೊಲೀಸ್ ಆಯುಕ್ತ ಭಾಸ್ಕರ ರಾವ್ ಅವರು ನಡೆಸಿರುವ ಸಂಧಾನ ಪ್ರತಯತ್ನಗಳು ವಿಫಲವಾಗಿವೆ. ಹೀಗಾಗಿ ಪ್ರತಿಭಟನೆ ಮುಂದುವರೆದಿದೆ.

ಇದರ ನಡುವೆ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಕರವೇ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿಗೌಡ ಸೇರಿದಂತೆ 13 ಜನ ಕಾರ್ಯಕರ್ತರು ಶರಣಾಗಿದ್ದಾರೆ. ರೋಗಿಗಳಿಗೆ ಸಮಸ್ಯೆಯಾಗಬಾರದೆಂದು ಶರಣಾಗಿದ್ದೇವೆ ಎಂದು ಕರವೇ ಹೇಳಿದೆ. ಹೀಗಿದ್ರೂ ಕಿರಿಯ ವೈದ್ಯರು ಪ್ರತಿಭಟನೆ ಮುಂದುವರೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!