ಶಾಸಕ ಖರ್ಗೆಗೆ ಸಿಎಂ ಬೊಮ್ಮಾಯಿ ತಿರುಗೇಟು

206

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮಾತನಾಡಿ 5 ಸಾವಿರ ಕೋಟಿ ಅನುದಾನ ನೀಡಲಾಗುವುದು ಎಂದಿದ್ದರು. ಇದಕ್ಕೆ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದರು.

ಇದಕ್ಕೆ ಪ್ರತ್ಯುತ್ತರ ನೀಡಿರುವ ಸಿಎಂ, ಮಹಾನಾಯಕ ಪ್ರಿಯಾಂಕ್ ಖರ್ಗೆ ಅನುದಾನದ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಕಳೆದ ಬಾರಿ ಬಜೆಟ್ ನಲ್ಲಿ 3 ಸಾವಿರ ಕೋಟಿ ಕೊಟ್ಟಿದ್ದೆವು. ಕ್ರಿಯಾ ಯೋಜನೆ ಕೂಡ ಆಗಿದೆ. ಆದರೆ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಆಗೋದು ಪ್ರಿಯಾಂಕ್ ಖರ್ಗೆಗೆ ಇಷ್ಟವಿಲ್ಲ ಎನಿಸುತ್ತದೆ. ಸುಮ್ಮನೆ ರಾಜಕೀಯ ಮಾಡುವುದು ಸರಿಯಲ್ಲ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!