ಯತ್ನಾಳ್ ಸಿಡಿ ಬಿಡುಗಡೆಗೆ ಕ್ಷಣಗಣನೆ ಅನ್ನೋ ಪೋಸ್ಟ್ ವೈರಲ್

247

ಪ್ರಜಾಸ್ತ್ರ ಸುದ್ದಿ

ವಿಜಯಪುರ: ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಿಡಿ ಬಿಡುಗಡೆ ಅನ್ನೋ ಪೋಸ್ಟರ್ ವೈರಲ್ ಆಗಿದೆ. ಬಿಜೆಪಿ ಹಿಂದು ಹುಲಿಯ ಸಿಡಿ ಬಿಡುಗಡೆಗೆ ಕ್ಷಣಗಣನೆ ಭರ್ಜರಿ ಯಶಸ್ಸು ಕಾಣಲಿ ಎಂದು ಆಶಿಸುತ್ತೇವೆ ಎಂದು ಬರೆದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ.

ಜೆಡಿಎಸ್ ಮಿಷನ್ 2023 ಅನ್ನೋ ಫೇಸ್ ಬುಕ್ ನಲ್ಲಿಯೂ ಯತ್ನಾಳ್ ಫೋಟೋ ಇರುವ ಪೋಸ್ಟರ್ ಕಾಣಿಸಿಕೊಂಡಿದೆ. ಇದಕ್ಕೆ ನೂರಾರು ಜನರು ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ವಿಜಯಪುರದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ, ಯತ್ನಾಳ್ ಆಪ್ತ ಲಕ್ಷ್ಮಣ ಜಾಧವ ದೂರು ದಾಖಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!