ಪರಿಷತ್ ಫೈಟ್: ಪಕ್ಷೇತರ ಅಭ್ಯರ್ಥಿಯ ಖಾಸಗಿ ವಿಡಿಯೋ ರಿಲೀಸ್

518

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇನ್ನೆರಡು ದಿನಗಳಲ್ಲಿ ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. ಹೀಗಿರುವ ಹೊತ್ತಿನಲ್ಲಿ ವಿಜಯಪುರ-ಬಾಗಲಕೋಟೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯೊಬ್ಬರದ್ದು ಎನ್ನಲಾಗುತ್ತಿರುವವರ ವಿಡಿಯೋವೊಂದನ್ನು ರಿಲೀಸ್ ಮಾಡಲಾಗಿದೆ.

ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ ಎಂದು ಹೇಳಲಾಗುತ್ತಿರುವ ವ್ಯಕ್ತಿಯ ಖಾಸಗಿ ವಿಡಿಯೋವನ್ನು ಬಿಡುಗಡೆ ಮಾಡಲಾಗಿದೆ. ಮಹಿಳೆಯೊಬ್ಬರೊಂದಿಗೆ ಖಾಸಗಿಯಾಗಿರುವ ವಿಡಿಯೋ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ನಿನ್ನೆಯಷ್ಟೇ ಅಭ್ಯರ್ಥಿ ವಿಡಿಯೋ ಬಿಡುಗಡೆ ಮಾಡುತ್ತಾರೆ ಎಂದು ಹೇಳಿದ್ದರಂತೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.




Leave a Reply

Your email address will not be published. Required fields are marked *

error: Content is protected !!