ಸಿಂದಗಿ ಮತಕೇಂದ್ರದಲ್ಲಿ ಮಾಸ್ಕ್, ಸಾಮಾಜಿಕ ಅಂತರ ಮಾಯ!

319

ಪ್ರಜಾಸ್ತ್ರ ಸುದ್ದಿ

ಸಿಂದಗಿ: ವಾಯುವ್ಯ, ಪಶ್ಚಿಮ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಪ್ರಕ್ರಿಯೆ ಪಟ್ಟಣದ ತಾಲೂಕು ಆಡಳಿತ ಕಚೇರಿಯಲ್ಲಿ ನಡೆಯುತ್ತಿದೆ. ಇಲ್ಲಿಯೇ ಎರಡು ಮತಗಟ್ಟೆ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಆದರೆ, ಈ ಮತಕೇಂದ್ರದಲ್ಲಿ ಮಾಸ್ಕ್, ಸಾಮಾಜಿಕ ಅಂತರ ಅನ್ನೋದೇ ಇಲ್ಲ.

ತಮ್ಮ ಹಕ್ಕು ಚಲಾವಣೆ ಮಾಡಲು ಬರುತ್ತಿರುವ ಮತದಾರರು ಹಾಗೂ ಇಲ್ಲಿನ ಕೆಲ ಸಿಬ್ಬಂದಿ ಸಹ ಮಾಸ್ಕ್ ಧರಿಸಿಲ್ಲ. ಕೆಲವರು ಕಾಟಾಚಾರಕ್ಕೆ ಎಂಬಂತ ಮಾಸ್ಕ್ ನ್ನು ಕುತ್ತಿಗೆಗೆ ಹಾಕಿಕೊಂಡಿದ್ದಾರೆ. ಇನ್ನು ಕೆಲವರು ಕೈವಸ್ತ್ರ ಕಟ್ಟಿಕೊಂಡು ಬರುತ್ತಿದ್ದಾರೆ. ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಡ್ಡಾಯ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಇಲ್ಲಿ ಅದೆಲ್ಲವೂ ಮಾಯವಾಗಿರುವುದು ಕಂಡು ಬಂದಿದೆ.




Leave a Reply

Your email address will not be published. Required fields are marked *

error: Content is protected !!