ಎಎಂಎಲ್ಸಿ ಚುನಾವಣೆ: ಮತದಾನ ಶುರು

256

ಪ್ರಜಾಸ್ತ್ರ ಸುದ್ದಿ

ವಿಜಯಪುರ: ವಾಯುವ್ಯ, ಪಶ್ಚಿಮ, ದಕ್ಷಿಣ ಕ್ಷೇತ್ರಗಳ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆಯ ಮತದಾನ ಪ್ರಕ್ರಿಯೆ ಶುರುವಾಗಿದೆ. ಜಿಲ್ಲೆಯಾದ್ಯಂತ ನಿರ್ಮಿಸಲಾಗಿರುವ ಮತಗಟ್ಟೆಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ವೋಟಿಂಗ್ ಕಾರ್ಯ ಪ್ರಾರಂಭವಾಗಿದೆ.

ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರ, ಹೋಬಳಿ ಕೇಂದ್ರಗಳಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅಲ್ದೇ, ಮತದಾರರ ಸಂಖ್ಯೆಗೆ ಅನುಗುಣವಾಗಿ ಮತಗಟ್ಟೆಗಳನ್ನು ಸಹ ನಿರ್ಮಿಸಲಾಗಿದೆ. ಸಂಜೆ 5 ಗಂಟೆಯ ತನಕ ವೋಟಿಂಗ್ ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!