ಸಿಎಂ ಸಿದ್ದರಾಮಯ್ಯಗೆ ಸೆಡ್ಡು ಹೊಡೆದ್ರಾ ಸ್ವಪಕ್ಷೀಯ ಶಾಸಕ?

104

ಪ್ರಜಾಸ್ತ್ರ ಸುದ್ದಿ

ಹಾವೇರಿ: ರಾಜ್ಯದ 130ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರಗಾಲ ಆವರಿಸಿಕೊಂಡಿದೆ. ಇದರಿಂದಾಗಿ ಜನರು ಕಂಗಾಲಾಗಿದ್ದಾರೆ. ಸರ್ಕಾರ ಮೋಡ ಬಿತ್ತನೆ ಮಾಡಲು ಇನ್ನು ಯೋಚನೆ ಮಾಡುತ್ತಿದೆ. ಇದರ ನಡುವೆ ಸ್ವಪಕ್ಷೀಯ ಶಾಸಕ ಪ್ರಕಾಶ್ ಕೋಳಿವಾಡ ಅವರು ಇಂದಿನಿಂದ ಮೂರು ದಿನ ಮೋಡ ಬಿತ್ತನೆ ಕಾರ್ಯ ನಡೆಸಿದ್ದಾರೆ.

ಪಕ್ಷಾತೀತ ಕಾಯಕದ ಕನಸು ಸಂಸ್ಥೆ ವತಿಯಿಂದ ಮೋಡ ಬಿತ್ತನೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 4ರಿಂದ ಮೂರು ದಿನಗಳ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ಕಾರ್ಯಾಚರಣೆ ನಡೆಯಲಿದೆ ಅಂತಾ ಹೇಳಿದ್ದಾರೆ.

ಮೋಡ ಬಿತ್ತನೆಗೆ ಜಿಲ್ಲಾಧಿಕಾರಿ ಹಾಗೂ ಕೇಂದ್ರ ಸರ್ಕಾರದಿಂದ ಪರವಾನಿಗೆ ಪಡೆಯಲಾಗಿದೆ. ನೆರೆಯ ಜಿಲ್ಲೆಗಳ ಸಚಿವರು, ಶಾಸಕರು ಇದಕ್ಕೆ ಸಾಥ್ ನೀಡಲಿದ್ದಾರೆ. ಮೂರು ದಿನಗಳ ಕಾಲ ಹಾವೇರಿ ಜಿಲ್ಲೆಯಲ್ಲಿ ಮೋಡಗಳು ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳಲಿದ್ದು, ಅಲ್ಲೆಲ್ಲ ಮೋಡ ಬಿತ್ತನೆ ಮಾಡಲಾಗುವುದು ಎಂದಿದ್ದಾರೆ.

ಕಳೆದ ಆಗಸ್ಟ್ 28ರಂದು ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಮೋಡ ಬಿತ್ತನೆ ಯಾವುದೇ ಕಾಲದಲ್ಲಿಯೂ ಯಶಸ್ವಿಯಾಗಿಲ್ಲ. ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. ಇದರ ಬದಲಾಗಿ ಬೇರೆ ಅಗತ್ಯ ಕ್ರಮಗಳಿಗೆ ಸೂಚಿಸಲಾಗಿದೆ ಅಂತಾ ಹೇಳಿದ್ದರು.




Leave a Reply

Your email address will not be published. Required fields are marked *

error: Content is protected !!