ಮೋದಿ ಉಪನಾಮ ಪ್ರಕರಣ: ರಾಹುಲ್ ಸುಪ್ರೀಂ ಮೊರೆ

102

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ಸಂಬಂಧ, ಗುಜರಾತ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ.

ಗುಜರಾತಿನ ಪೂರ್ಣೇಶ್ ಮೋದಿ ಎಂಬುವರು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಸೂರತ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು. ಹೀಗಾಗಿ ಲೋಕಸಭಾ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಇದನ್ನು ಪ್ರಶ್ನಿಸಿ ಗುಜರಾತ್ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಅಲ್ಲಿ ಇವರ ಅರ್ಜಿ ಸಲ್ಲಿಸಿ ಕೆಳಹಂತದ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿಯಲಾಯಿತು.

ಇದೀಗ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಸುಪ್ರೀಂನಲ್ಲಿ ಕೇವಿಯಟ್ ಸಲ್ಲಿಸಿದ್ದು, ಅಲ್ಲಿ ಏನು ತೀರ್ಪು ಬರುತ್ತೆ ಅನ್ನೋ ಕುತೂಹಲವಿದೆ.




Leave a Reply

Your email address will not be published. Required fields are marked *

error: Content is protected !!