ಡಿಪಿ ಬದಲಿಸದ ಭಾಗವತ್, ಆರ್ ಎಸ್ಎಸ್.. ಪಿಎಂ, ಸಿಎಂ ಪ್ರಶ್ನಿಸಿದ ಸಿದ್ದರಾಮಯ್ಯ

174

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: 75ನೇ ಸ್ವಾತಂತ್ರ್ಯದ ಅಮೃತ್ ಮಹೋತ್ಸವ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ನಿಮ್ಮ ಡಿಪಿ ಬದಲಿಸಲು ಪ್ರಧಾನಿ ಮೋದಿ ಕರೆ ನೀಡಿದ್ದರು. ಹೀಗಾಗಿ ಬಹುತೇಕರು ತಮ್ಮ ಸೋಷಿಯಲ್ ಮೀಡಿಯಾಗಳ ಡಿಪಿ ಬದಲಿಸಿದ್ದಾರೆ. ಆದರೆ, ಆರ್ ಎಸ್ಎಸ್ ಹಾಗೂ ಅದರ ಮುಖ್ಯಸ್ಥ ಮೋಹನ್ ಭಾಗವತ್ ಡಿಪಿ ಬದಲಿಸದ ಬಗ್ಗೆ ಕರ್ನಾಟಕ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ರಾಷ್ಟ್ರಧ್ವಜದ ಬಗೆಗಿನ ನಿಲುವನ್ನು ಆರ್ ಎಸ್ ಎಸ್ ಬದಲಾಯಿಸಿಕೊಂಡು ‘ಹರ್ ಘರ್ ಮೇ ತಿರಂಗಾ’ ಕಾರ್ಯಕ್ರಮವನ್ನು ಬೆಂಬಲಿಸುತ್ತದೆ ಎಂದು ನಿಮಗನಿಸುತ್ತಿದೆಯೇ? ಬದಲಾಯಿಸಿಕೊಂಡಿದ್ದರೆ ಅದಕ್ಕೆ ಕಾರಣಗಳೇನು ಎಂದು ತಿಳಿಸುವಿರಾ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರಧಾನಿ ಮೋದಿ ಎಂದು ಪ್ರಶ್ನಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!