ನಾಳೆ 10ನೇ ತರಗತಿ ಫಲಿತಾಂಶ: ಫಲಿತಾಂಶ ನೋಡುವುದು ಹೇಗೆ?

271

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸೋಮವಾರ ಮಧ್ಯಾಹ್ನ 3.30ಕ್ಕೆ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗುತ್ತಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ ತಿಳಿಸಿದ್ದಾರೆ. ಯಡಿಯೂರಪ್ಪ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ಸುರೇಶಕುಮಾರ ಪರೀಕ್ಷೆಯ ನಡೆಸಿದ್ರು. ಆದ್ರೆ, ಈಗ ಆ ಸ್ಥಾನದಲ್ಲಿ ಇಬ್ಬರೂ ಬದಲಾಗಿದ್ದಾರೆ.

ಈ ಬಾರಿ ಒಟ್ಟು 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಮೂಲಕ ಕೋವಿಡ್ ಆತಂಕದ ನಡುವೆಯೂ ಶೇಕಡ 99.65 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ 4,885 ಪರೀಕ್ಷೆ ಕೇಂದ್ರಗಳಲ್ಲಿ 73,064 ಪರೀಕ್ಷಾ ಕೊಠಡಿಗಳಲ್ಲಿ ಕೋವಿಡ್ ಮಾರ್ಗಸೂಚಿ ಅನ್ವಯ ಪರೀಕ್ಷೆ ನಡೆಸಲಾಯ್ತು. ಇದಕ್ಕೆ 1.19 ಲಕ್ಷ ಸಿಬ್ಬಂದಿ ನೇಮಕವಾಗಿದ್ದರು.

ಆಗಸ್ಟ್ 9, ಸೋಮವಾರ ಮಧ್ಯಾಹ್ನ 3.30ಕ್ಕೆ ಪ್ರಕಟಗೊಳ್ಳುವ ಫಲಿತಾಂಶವನ್ನ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ಆದ http://kseeb.kar.nic.in ನಲ್ಲಿ ನೋಡಬಹುದು. ವಿದ್ಯಾರ್ಥಿಗಳು ರಿಜಿಸ್ಟರ್ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ರಿಸಲ್ಟ್ ನೋಡಬಹುದಾಗಿದೆ.




Leave a Reply

Your email address will not be published. Required fields are marked *

error: Content is protected !!