ಮೂವರ ಮೇಲೆ ಮಂಗಗಳ ದಾಳಿ: ಗಂಭೀರ ಗಾಯ

227

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಮಂಗಗಳ ದಾಳಿಯಿಂದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಅರಳದಿನ್ನಿ ಗ್ರಾಮದಲ್ಲಿ ನಡೆದಿದೆ. ಹಣಮಂತ ತುಬಾಕಿ (25) ಸೇರಿ ಇನ್ನಿಬ್ಬರು ಅಪರಿಚಿತರ ಮೇಲೆ ಮಂಗಗಳು ದಾಳಿ ಮಾಡಿವೆ.

ಹಣಮಂತ ತುಬಾಕಿ ನಿಡಗುಂದಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯಿಂದ ಆತಂಕಕ್ಕೆ ಒಳಗಾಗಿರುವ ಸ್ಥಳೀಯರು, ಇಂತಹ ಮಂಗಗಳನ್ನು ಹಿಡಿದು ಅರಣ್ಯಕ್ಕೆ ಬಿಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!