ಮೂಗೂರು ಏತ ನೀರಾವರಿ ಯೋಜನೆಗೆ ಸಿಎಂ ಚಾಲನೆ

260

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಸೊರಬ ತಾಲೂಕಿನ ವಿವಿಧ ಗ್ರಾಮಗಳಿಗೆ ನೀರು ಪೂರೈಕೆ ಮಾಡುವ ಮೂಗೂರು ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ತಾಲೂಕಿನ ಆವನಕಟ್ಟಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಿದ್ರು.

ಈ ಯೋಜನೆಯಿಂದ ವಿವಿಧ ಹಳ್ಳಿಗೆ ಕುಡಿಯುವ ನೀರು ಸಿಗಲಿದೆ. ಅಲ್ದೇ ಅಂತರ್ಜಲ ಹೆಚ್ಚಲಿದೆ ಎಂದು ಸಿಎಂ ಹೇಳಿದ್ರು. ಈ ಬಾರಿಯ ಬಜೆಟ್ ನಲ್ಲಿ ನೀರಾವರಿಗೆ ಹಚ್ಚಿನ ಆದ್ಯತೆ ನೀಡಲಾಗಿದೆ ಎಂದರು. 105 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯಿಂದ 31 ಕೆರೆಗಳಿಗೆ ನೀರು ತುಂಬಿಸುವ ಕೆಲಸವಾಗಲಿದೆ. ಈ ಮೂಲಕ ಸೊರಬ ತಾಲೂಕಿನ ಬಹುತೇಕ ಹಳ್ಳಿಗಳಿಗೆ ನೀರಿನ ಸೌಲಭ್ಯ ಸಿಗಲಿದೆ.

ಈ ವೇಳೆ ಸಚಿವ ಭೈರತಿ ಬಸವರಾಜು, ಶಾಸಕ ಕುಮಾರ ಬಂಗಾರಪ್ಪ, ಸಂಸದ ಬಿ.ವೈ ರಾಘವೇಂದ್ರ, ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ ಸೇರಿದಂತೆ ಅನೇಕರು ಉಪಸ್ಥಿತರಿದ್ರು.




Leave a Reply

Your email address will not be published. Required fields are marked *

error: Content is protected !!