ರಾಜ್ಯದಲ್ಲಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗ: ಸಿಎಂ ಬೊಮ್ಮಾಯಿ

137

ಪ್ರಜಾಸ್ತ್ರ ಸುದ್ದಿ

ಕೊಪ್ಪಳ: ರಾಜ್ಯದಲ್ಲಿ 5 ಲಕ್ಷಕ್ಕೂ ಹೆಚ್ಚು ನಿರುದ್ಯೋಗ ಯುವಕ, ಯುವತಿಯರಿಗೆ ನಮ್ಮ ಸರ್ಕಾರ ಕೆಲಸ ನೀಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ನಗರದಲ್ಲಿ ಬಿಜೆಪಿ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಹೇಳಿಕೆಗೆ ಬದ್ಧವಾಗಿದೆ. 5 ಲಕ್ಷಕ್ಕೂ ಹೆಚ್ಚು ಯುವಕ, ಯುವತಿಯರಿಗೆ ಉದ್ಯೋಗ ನೀಡುತ್ತೇವೆ ಎಂದರು.

ಅಂಜನಾದ್ರಿ ಬೆಟ್ಟದ ರಸ್ತೆಗಳ ಅಭಿವೃದ್ಧಿ ಬಗ್ಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತೆ. ಇನ್ನು ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿ, 4 ಸಾವಿರ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದರು.

ನಮ್ಮ ಸರ್ಕಾರದ ಅಭಿವೃದ್ಧಿ ಪರ ಯೋಜನೆಗಳು ರಾಜ್ಯದ ಪ್ರತಿಯೊಬ್ಬರಿಗೂ ತಲುಪಿವೆ. ಕಾಂಗ್ರೆಸ್ ನಾಯಕರು ಹಗಲು ಕನಸು ಕಾಣುತ್ತಿದ್ದು, ಅವರದ್ದು ತಿರುಕನ ಕನಸು ಎಂದು ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ ನಡೆಸಿದರು.

ಇನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ರಾಜ್ಯದ 10 ಜಿಲ್ಲೆಗಳಲ್ಲಿ ನೂತನವಾಗಿ ನಿರ್ಮಿಸಿರುವ ಬಿಜೆಪಿ ಜಿಲ್ಲಾ ಕಾರ್ಯಾಲಯಗಳನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಈ ವೇಳೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಸಚಿವರು, ಶಾಸಕರು, ಮುಖಂಡರು ಹಾಜರಿದ್ದರು.




Leave a Reply

Your email address will not be published. Required fields are marked *

error: Content is protected !!