ಮೂತ್ರ ವಿಸರ್ಜನೆ ಪ್ರಕರಣ: ಕಾರ್ಮಿಕನ ಪಾದ ತೊಳೆದ ಸಿಎಂ

166

ಪ್ರಜಾಸ್ತ್ರ ಸುದ್ದಿ

ಭೋಪಾಲ್: ಕಳೆದ ಏಳು ದಿನಗಳ ಹಿಂದೆ ಬುಟ್ಟಕಟ್ಟು ಸಮುದಾಯದ ವ್ಯಕ್ತಿಯ ಮೇಲೆ ಓರ್ವ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಎಲ್ಲೆಡೆ ವೈರಲ್ ಆಗಿತ್ತು. ಮಧ್ಯಪ್ರದೇಶದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶಗಳು ವ್ಯಕ್ತವಾದವು. ಇಂದು ಸಂತ್ರಸ್ತ ಕಾರ್ಮಿಕನ ಪಾದವನ್ನು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ತೊಳೆದು ಕ್ಷಮೆ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮೂಲಕ ಸಿಎಂ ತಿಳಿಸಿದ್ದಾರೆ. ಬುಡಕಟ್ಟು ಸಮುದಾಯದ ಕಾರ್ಮಿಕ ದಶಮತ್ ರಾವತ್, ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ನಿಮ್ಮ ದುಃಖವನ್ನು ಹಂಚಿಕೊಳ್ಳಲು ಇದೊಂದು ಸಣ್ಣ ಪ್ರಯತ್ನ ಅಂತಾ ಹೇಳಿದ್ದಾರೆ.

ಪಾದಚಾರಿ ಮಾರ್ಗದಲ್ಲಿ ಕುಳಿತಿದ್ದ ದಶಮತ್ ಮೇಲೆ ಪ್ರವೇಶ್ ಶುಕ್ಲಾ ಎಂಬಾತ ಮೂತ್ರ ವಿಸರ್ಜನೆ ಮಾಡಿದ್ದ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆತನ ಮೇಲೆ ಪರಿಶಿಷ್ಟ ಜಾತಿ, ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!