ಕಮಲ ಮುಡಿಯಲು ಸಂಸದೆ ಸುಮಲತಾ ರೆಡಿ?

505

ಮಂಡ್ಯ: ಸಂಸದೆ ಸುಮಲತಾ ಅಂಬರೀಶ ಅವರ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಅಂತಾ ಹೇಳಲಾಗ್ತಿದೆ. ಇಂದು ಬೆಳಗ್ಗೆ ನಗರದ ಬಿಜೆಪಿ ಕಚೇರಿಯಲ್ಲಿ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಅನ್ನೋ ವಿಷ್ಯ ಭರ್ಜರಿಯಾಗಿ ಹರಿದಾಡ್ತಿದೆ.

ಇಂದು ಬೆಳಗ್ಗೆ 11ಗಂಟೆಗೆ ನಗರದ ಬಿಜೆಪಿ ಕಚೇರಿಯಲ್ಲಿ ನಡೆಯುವ ಕಾರ್ಯಕರ್ತರ ಸಭೆಯಲ್ಲಿ ಅಧಿಕೃತ ಘೋಷಣೆಯಾಗಲಿದೆ ಎನ್ನಲಾಗ್ತಿದೆ. ಲೋಕಸಭಾ ಚುನಾವಣಾ ಟೈಂನಲ್ಲಿ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ, ಬಿಜೆಪಿ ಬೆಂಬಲ ಪಡೆದಿದ್ದ ಸಂಸದೆ ಇಂದು ಬಿಜೆಪಿ ಸೇರಲಿದ್ದಾರೆ ಅಂತಾ ಹೇಳಲಾಗ್ತಿದೆ. ಹೀಗಾಗಿ ಸಂಸದೆ ಸುಮಲತಾ ಅಂಬರೀಶ ಅವರ ನಡೆಯ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ.

ಸಾಂದರ್ಭಿಕ ಚಿತ್ರ ಬಳಸಲಾಗಿದೆ




Leave a Reply

Your email address will not be published. Required fields are marked *

error: Content is protected !!