ಸುಮಕ್ಕಾ ಎಲ್ಲೀದಿಯಕ್ಕಾ ಪೋಸ್ಟ್ ವೈರಲ್…

298

ಪ್ರಜಾಸ್ತ್ರ ಸುದ್ದಿ

ಮಂಡ್ಯ: ಸಂಸದೆ ಸುಮಲತಾ ಅಂಬರೀಶ, ಕಳೆದ ಎರಡು ತಿಂಗಳಿನಿಂದ ಮಂಡ್ಯಕ್ಕೆ ಬಂದಿಲ್ವಂತೆ. ಕರೋನಾದಿಂದ ಜನರು ಪರದಾಡ್ತಿದ್ದಾರೆ. ಈ ಭಾಗದ ಸಂಸದೆಯಾಗಿ ಜನರ ಕಷ್ಟಗಳಿಗೆ ಸ್ಪಂದಿಸ್ತಿಲ್ಲವೆಂದು ಸೋಷಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ಶುರುವಾಗಿದೆ. ಇದರ ನಡುವೆ ಸುಮಕ್ಕಾ ಎಲ್ಲೀದಿಯಕ್ಕಾ ಅನ್ನೋ ಪೋಸ್ಟರ್ ವೈರಲ್ ಆಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಪೋಸರ್ ವೈರಲ್ ಆಗ್ತಿದ್ದಂತೆ ಎಚ್ಚೆತ್ತುಕೊಂಡಿರುವ ಸಂಸದೆ, ಸೋಮವಾರ ಮಧ್ಯಾಹ್ನ 3 ಗಂಟೆಗೆ ಮಂಡ್ಯಕ್ಕೆ ಭೇಟಿ ನೀಡ್ತಿದ್ದಾರೆ. ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸುವ ಮೂಲಕ, ಕರೋನಾ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ ಎಂದು ಅವರ ಕಾರ್ಯದರ್ಶಿ ತಿಳಿಸಿದ್ದಾರೆ. ಇದಕ್ಕೆ ಜನರು ಧನ್ಯವಾದಗಳನ್ನ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!