ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂಸದೆ

343

ಮಂಡ್ಯ: ಸಂಸದೆ ಸುಮಲತಾ ಅಂಬರೀಶ ಅವರು ಇತ್ತೀಚೆಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದು, ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಸಂಸದೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ರು. ಆದ್ರೆ, ಇಂದು ನಲಮಂಗಲ ತಾಲೂಕಿನಲ್ಲಿರುವ ಕಾಂಗ್ರೆಸ್ ಕಚೇರಿಗೆ ಸಂಸದೆ ಭೇಟಿ ನೀಡಿದ್ರು.

ನಾಗಮಂಗಲದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ರು. ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಿದ್ರು. ಇದಕ್ಕೂ ಮೊದ್ಲು ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಕಾಂಗ್ರೆಸ್ ಕಾರ್ಯಕರ್ತರಿಗೆ ಧನ್ಯವಾದಗಳನ್ನ ಅರ್ಪಿಸಿದ್ರು. ಕಚೇರಿಗೆ ಭೇಟಿ ನೀಡಿದ ಸಂಸದೆಯನ್ನ ಸ್ವಾಗತಿಸಿ ಗೌರವಿಸಲಾಯ್ತು.




Leave a Reply

Your email address will not be published. Required fields are marked *

error: Content is protected !!