ಪ್ರಜಾಸ್ತ್ರ ಸುದ್ದಿ
ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಕುಟುಂಬಕ್ಕೆ ಬೆದರಿಕೆ ಕರೆ ಮಾಡಲಾಗಿದೆ. ರಿಲಯನ್ಸ್ ಫೌಂಡೇಷನ್ ಆಸ್ಪತ್ರೆಯ ಡಿಸ್ಪ್ಲೇ ನಂಬರ್ ನಲ್ಲಿ ಬೆದರಿಕೆ ಕರೆ ಮಾಡಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಬೆದರಿಕೆ ಕರೆಯಿಂದ ಮನೆಯ ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅಲ್ಲದೇ ರಿಲಯನ್ಸ್ ಫೌಂಡೇಷನ್ ಆಸ್ಪತ್ರೆಗೆ ಆಡಳಿತಾಧಿಕಾರಿಗಳು ಡಿಬಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಓರ್ವನನ್ನು ಬಂಧಿಸಲಾಗಿದೆ.