ಮಾಜಿ ಸಿಎಂ ಮುಲಾಯಂ ಸಿಂಗ್ ಆಸ್ಪತ್ರೆಗೆ ದಾಖಲು

326

ಲಕ್ನೋ: ಉತ್ತರ ಪ್ರದೇಶದ ಮಾಜಿ ಸಿಎಂ, ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. 80 ವರ್ಷದ ಮುಲಾಯಂ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಲಕ್ನೋದ ಖಾಸಗಿ ಆಸ್ಪತ್ರೆಗೆ ಇವರನ್ನ ದಾಖಲಿಸಲಾಗಿದೆ.

ಹೊಟ್ಟೆನೋವು ಹಾಗೂ ಮೂತ್ರ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಅಸ್ವಸ್ಥಗೊಂಡಿದ್ದಕ್ಕೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅವರ ಆರೋಗ್ಯ ಸುಧಾರಿಸಿದ್ದು, ದೇಹಸ್ಥಿತಿ ಬಗ್ಗೆ ನಿಗಾ ವಹಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!