ಕಿತ್ತೂರು ಕರ್ನಾಟಕ ನಾಮಕರಣಕ್ಕೆ ಸಚಿವ ಅಸ್ತು

286

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಈ ವೇಳೆ ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ಸಚಿವ ಸಂಪುಟದಲ್ಲಿ ಪ್ರಸ್ತಾವನೆಗೆ ಬಂದ ವಿಷಯಕ್ಕೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದಾರೆ.

ಉತ್ತರ ಕನ್ನಡ, ಬೆಳಗಾವಿ, ಹಾವೇರಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಗದಗ ಜಿಲ್ಲೆಗಳನ್ನು ಸೇರಿಕೊಂಡ ಪ್ರದೇಶವನ್ನು ಕಲ್ಯಾಣ ಕರ್ನಾಟಕವೆಂದು ನಾಮಕರಣ ಮಾಡಬೇಕು ಅಂತ ಪ್ರಸ್ತಾವನೆ ಬಂದಿತ್ತು. ಇದಕ್ಕೆ ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದರು.




Leave a Reply

Your email address will not be published. Required fields are marked *

error: Content is protected !!