ಹಾಸನದಲ್ಲಿ ಯುವಕನ ಹತ್ಯೆ

226

ಪ್ರಜಾಸ್ತ್ರ ಅಪರಾಧ ಸುದ್ದಿ

ಹಾಸನ: ತಲೆ ಮೇಲೆ ಕಲ್ಲು ಎತ್ತಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ಹತ್ತಿರದಲ್ಲಿ ನಡೆದಿದೆ. 27 ವರ್ಷದ ನವಾಜ್ ಕೊಲೆಯಾದ ಯುವಕನಾಗಿದ್ದಾನೆ. ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಹೋಗಿದ್ದಾರೆ. ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೊಲೆ ಮಾಡಿದ್ದು ಯಾರು? ಈ ಕೃತ್ಯಕ್ಕೆ ಕಾರಣ ಏನು ಅನ್ನೋದು ತಿಳಿದು ಬಂದಿಲ್ಲ. ಅದರ ತನಿಖೆ ನಡೆಸಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!