ಕಲಬುರಗಿಯಲ್ಲಿ ಸಂಸದರ ಆಪ್ತನ ಹತ್ಯೆ

209

ಪ್ರಜಾಸ್ತ್ರ ಅಪರಾಧ ಸುದ್ದಿ

ಕಲಬುರಗಿ: ಬಿಜೆಪಿ ಸಂಸದ ಉಮೇಶ್ ಜಾಧವ್ ಆಪ್ತ ಗಿರೀಶ್ ಬಾಬು ಚಕ್ರ(31) ಎಂಬಾತನನ್ನು ಹತ್ಯೆ ಮಾಡಲಾಗಿದೆ. ಗುರುವಾರ ರಾತ್ರಿ ಹೊಲದಲ್ಲಿ ಕೊಲೆಯಾಗಿದೆ.

ದೂರ ಸಂಪರ್ಕ ಇಲಾಖೆ ಕಲಬುರಗಿ ವಿಭಾಗದ ಸಲಹಾ ಸಮಿತಿ ಸದಸ್ಯರನ್ನಾಗಿ ಗಿರೀಶ್ ಬಾಬು ಚಕ್ರರನ್ನು ಇತ್ತೀಚೆಗೆ ನಾಮನಿರ್ದೇಶನ ಮಾಡಲಾಗಿತ್ತು. ಹೀಗಾಗಿ ಪಾರ್ಟಿ ಕೊಡಿಸುವುದಾಗಿ ಹೇಳಿ ಸ್ನೇಹಿತರು ಹೊಲಕ್ಕೆ ಕರೆಸಿಕೊಂಡು ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದ ಗಿರೀಶ್ ಬಾಬು ಚಕ್ರ, ಸಂಸದ ಡಾ.ಉಮೇಶ್ ಜಾಧವ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ. ಕೊಲೆಗೆ ಕಾರಣ ಏನು ಅನ್ನೋದು ತಿಳಿದು ಬಂದಿಲ್ಲ. ಗಾಣಗಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!