ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

332

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ನಗರದ ಹಳೆ ಜೇವರ್ಗಿ ರಸ್ತೆಯಲ್ಲಿ ಕಳೆದ ರಾತ್ರಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಹೌಸಿಂಗ್ ಬೋರ್ಡ್ ನಗರದ ನಿವಾಸಿ 23 ವರ್ಷದ ಜಮೀರ್ ಕೊಲೆಯಾದ ಯುವಕ.

ಕಳೆದ ರಾತ್ರಿ ಐದಾರು ಜನ ದುಷ್ಕರ್ಮಿಗಳು ಕೂಡಿಕೊಂಡು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ. ಹಳೆ ವೈಷ್ಯಮದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ನಗರದ ಸ್ಟೇಷನ್ ಬಜಾರ್ ಠಾಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!