ಅನೈತಿಕ ಸಂಬಂಧದ ಶಂಕೆಗೆ ಬಲಿಯಾದ ಪತ್ನಿ

508

ಅಥಣಿ: ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದಲ್ಲಿ, ಅನೈತಿಕ ಸಂಬಂಧದ ಶಂಕೆಯ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಈ ಒಂದು ಭೀಕರ ಘಟನೆ ನಡೆದಿದೆ.

45 ವರ್ಷದ ಲಕ್ಷ್ಮಿಬಾಯಿ ಸಿದ್ರಾಯ ಮೋಳೆ ಕೊಲೆಯಾದ ದುರ್ದೈವಿ. ನಿನ್ನೆ ತಡರಾತ್ರಿ ಪತಿ, ಪತ್ನಿಯನ್ನ ಕೊಲೆ ಮಾಡಿದ್ದಾನೆ. ಆರೋಪಿ ಸಿದ್ರಾಯ ನಿಂಗಪ್ಪ ಮೋಳೆನನ್ನ ಪೊಲೀಸ್ರು ವಶಕ್ಕೆ ಪಡೆದಿದ್ದಾರೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಹತ್ಯೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!