ಕಲಬುರಗಿಯಲ್ಲಿ ಗುಂಡಿಕ್ಕಿ ವ್ಯಕ್ತಿಯ ಕೊಲೆ

347

ಪ್ರಜಾಸ್ತ್ರ ಅಪರಾಧ ಸುದ್ದಿ

ಕಲಬುರಗಿ: ಜೇವರ್ಗಿ ತಾಲೂಕಿನ ಬಳ್ಳುಂಡಗಿ ಗ್ರಾಮದ ಹತ್ತಿರ ಕಾರು ಅಡ್ಡಗಟ್ಟಿ ಹಲವು ಸುತ್ತಿನ ಗುಂಡು ಹಾರಿಸಿ ವ್ಯಕ್ತಿಯೊಬ್ಬನನ್ನ ಕೊಲೆ ಮಾಡಲಾಗಿದೆ. ಹಣಮಂತ ಚಂದ್ರಶಾ ಕೂಡಲಗಿ(40) ಕೊಲೆಯಾದ ವ್ಯಕ್ತಿಯಾಗಿದ್ದಾನೆ.

ಕೊಲೆಯಾದ ವ್ಯಕ್ತಿ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ, ಕಾಂಗ್ರೆಸ್ ಮುಖಂಡ ಶಾಂತಪ್ಪ ಕೂಡಲಗಿ ಅವರ ಕಿರಿಯ ಸಹೋದರನಾಗಿದ್ದಾನೆ. ಎರಡು ವರ್ಷಗಳ ಹಿಂದೆ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹತ್ಯೆ ನಡೆದಿದೆ ಎನ್ನಲಾಗ್ತಿದೆ.

2019ರಲ್ಲಿ ಮಯೂರ ಗ್ರಾಮದ ಬಿಜೆಪಿ ಮುಖಂಡ ಶಿವಲಿಂಗ ಭಾವಿಕಟ್ಟಿ ಎಂಬುವರ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಶಾಂತಪ್ಪ ಹಾಗೂ ಹಣಮಂತ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿ, ಜೈಲು ಸೇರಿದ್ರು. ಕೆಲ ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರಗೆ ಬಂದಿದ್ರು. ಈ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲೇ ಈ ಕೃತ್ಯ ನಡೆದಿದೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!