ಮುರುಘಾ ಶ್ರೀಗಳ ವಿರುದ್ಧ ಪ್ರಕರಣದ ಬಗ್ಗೆ ಸಿಎಂ ಏನಂದರು

171

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಸ್ವಾಮೀಜಿ ವಿರುದ್ಧ ಕೇಳಿ ಬಂದಿರುವ ಲೈಂಗಿಕ ಕಿರುಕುಳದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮುರುಘಾ ಶ್ರೀಗಳ ವಿರುದ್ಧ ಕಿಡ್ನಾಪ್ ಹಾಗೂ ಪೋಕ್ಸೋ ಅಡಿ ಪ್ರಕರಣ ದಾಖಲಾಗಿವೆ. ಎರಡು ಪ್ರಕರಣಗಳು ತನಿಖೆ ನಡೆಯುತ್ತಿದ್ದು, ಈ ಹಂತದಲ್ಲಿ ಮಾತನಾಡಲು ಆಗಲ್ಲ. ತನಿಖೆ ಬಳಿಕ ಸತ್ಯ ಹೊರ ಬರಲಿದೆ ಎಂದಿದ್ದಾರೆ.

ಮೈಸೂರಿನಿಂದ ಚಿತ್ರದುರ್ಗಕ್ಕೆ ಬಾಲಕಿಯರನ್ನು ಕರೆದುಕೊಂಡು ಬರಲಾಗಿದೆ. ಇನ್ನು ಸ್ವಾಮೀಜಿ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ, ಸ್ವಾಮೀಜಿ ಸಂಧಾನಕ್ಕೂ ಸಿದ್ಧ ಸಮರಕ್ಕೂ ಸಿದ್ಧ ಎಂದು ಹೇಳಿರುವ ಮಾತು ಸಾಕಷ್ಟು ಚರ್ಚೆಗೆ ಒಳಗಾಗಿದೆ. ತಪ್ಪು ಮಾಡಿಲ್ಲವೆಂದ ಮೇಲೆ ಸಂಧಾನದ ಮಾತ್ಯಾಕೆ? ಕಾನೂನು ಹೋರಾಟ ಮಾಡಬೇಕು ಎಂದು ಕೆಲ ಭಕ್ತವೃಂಧ, ಸಾರ್ವಜನಿಕರು ಹೇಳುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!