ಬಾಲಿವುಡ್ ಅಂಗಳದ ಖ್ಯಾತ ಸಂಗೀತ ನಿರ್ದೇಶಕ ಮಹ್ಮದ್ ಝಹೂರ್ ಖಯ್ಯಾಮ್ ಹಸ್ಮಿ ನಿಧನರಾಗಿದ್ದಾರೆ. ಜುಲೈ 28 ರಂದು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ 92 ವರ್ಷದ ಖಯ್ಯಾಮ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ.
ಶ್ವಾಸಕೋಶದ ಸೋಂಕು ತೀವ್ರವಾದ ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯಾಘಾತದಿಂದ ಖಯ್ಯಾಮ್ ನಿಧನರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಕಭೀ ಕಭೀ, ನೂರಿ, ಉಮ್ರಾವೊ ಜಾನ್, ರಝಿಯಾ ಸುಲ್ತಾನ್, ಬಝಾರ್ ಸೇರಿದಂತೆ ಹಲವು ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಗಾಯಕ ಸೋನು ನಿಗಮ್ ಸೇರಿ ಅನೇಕರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ.