ಮಸೀದಿಗೆ ಮಹಿಳೆಯರ ಪ್ರವೇಶಕ್ಕೆ ಅರ್ಜಿ: ಕೇಂದ್ರಕ್ಕೆ ಸುಪ್ರೀಂ ನೋಟಿಸ್

386

ನವದೆಹಲಿ: ಮುಸ್ಲಿಂ ಮಹಿಳೆಯರಿಗೆ ಮಸೀದಿಯೊಳಗೆ ಪ್ರವೇಶಕ್ಕೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.

ಮಸೀದಿ ಪ್ರವೇಶಕ್ಕೆ ಮಹಿಳೆಯರನ್ನ ನಿರ್ಬಂಧ ಹೇರುವುದು ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಹೀಗಾಗಿ ಪ್ರವೇಶ ಒದಗಿಸುವಂತೆ ಸರ್ಕಾರ, ವಕ್ಫ್ ಬೋರ್ಡ್ ಮಂಡಳಿ ಸೇರಿ ಮುಸ್ಲಿಂ ಸಂಸ್ಥೆಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ, ಯಾಸ್ಮೀನ ಝುಬೇರ ಅಹ್ಮದ ಎಂಬುವವರು ಅರ್ಜಿ ಸಲ್ಲಿಸಿದ್ರು. ಇದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ ಗೊಗಯ್ ನೇತೃತ್ವದ ನ್ಯಾಯಪೀಠ, ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ನೋಟಿಸ್ ನೀಡಿದೆ.

ಅಖಿಲ ಭಾರತ ಹಿಂದೂ ಮಹಾಸಭಾದ ಕೇರಳ ಘಟಕದ ಅಧ್ಯಕ್ಷರು ಅರ್ಜಿ ಸಲ್ಲಿಸಿದ್ರು. ಇದನ್ನ ಜುಲೈನಲ್ಲಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್, ನಿಮ್ಗೇನು ತೊಂದರೆ? ತೊಂದರೆಯಾದವರು ನಮ್ಮ ಬಳಿ ಬರಲಿ. ಆಗ ಪರಿಗಣಿಸೋಣ ಎಂದಿತ್ತು. ಇದೀಗ ಯಾಸ್ಮೀನ ಝುಬೇರ ಅಹ್ಮದ ಎಂಬುವವರು ಅರ್ಜಿ ಸಲ್ಲಿಸಿದ್ದು, ನವೆಂಬರ್ 5ಕ್ಕೆ ವಿಚಾರಣೆಯನ್ನ ನಿಗದಿ ಮಾಡಿದೆ.




Leave a Reply

Your email address will not be published. Required fields are marked *

error: Content is protected !!