ದಸರಾಗೆ ಚಾಲನೆ ನೀಡಿದ ಎಸ್.ಎಂ ಕೃಷ್ಣ

477

ಪ್ರಜಾಸ್ತ್ರ ಸುದ್ದಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಎಸ್.ಎಂ ಕೃಷ್ಣ ಗುರುವಾರ ಚಾಲನೆ ನೀಡಿದರು. ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ 411ನೇ ದಸರಾ ಹಬ್ಬಕ್ಕೆ ಚಾಲನೆ ನೀಡಿದರು.

ಈ ವೇಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ಸುನೀಲ್ ಕುಮಾರ್, ಎಸ್.ಟಿ ಸೋಮಶೇಖರ್, ಡಾ.ಕೆ.ಸುಧಾಕರ್, ಭೈರತಿ ಬಸವರಾಜ್, ಶಿವರಾಂ ಹೆಬ್ಬಾರ್, ಸಂಸದ ಪ್ರತಾಪ್ ಸಿಂಹ್, ಮಾಜಿ ಸಚಿವ ತನ್ವೀರ್ ಸೇಠ್, ಶಾಸಕ ರಾಮದಾಸ್, ಎಂಎಲ್ ಸಿ ಹೆಚ್.ವಿಶ್ವನಾಥ್ ಸೇರಿದಂತೆ ಸೇರಿದಂತೆ ಅನೇಕರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!