ಕಾಂಗ್ರೆಸ್ ನವರಿಂದ ನನ್ನನ್ನು ರೇಪ್ ಮಾಡುವ ಪ್ರಯತ್ನ: ಗೃಹ ಸಚಿವ ಅರಗ

213

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ.

ರೇಪ್ ನಡೆದಿರುವುದು ಅಲ್ಲಿ. ಆ ಯುವಕ, ಯುವತಿ ಅಲ್ಲಿಗೆ ಹೋಗಬಾರದಿತ್ತು. ಆದ್ರೆ, ಕಾಂಗ್ರೆಸ್ ನವರು ರಾಜಕೀಯ ಮಾಡುತ್ತಿದ್ದಾರೆ. ಕಾಂಗ್ರೆಸ್ ನವರು ನನ್ನನ್ನ ರೇಪ್ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಗೃಹ ಸಚಿವರನ್ನೇ ರೇಪ್ ಮಾಡುವ ಪ್ರಯತ್ನ ಮಾಡ್ತಿದ್ದಾರೆ ಎಂದು ಅತ್ಯಂತ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ.

ಇತ್ತೀಚೆಗೆ ಯಾದಗಿರಿಗೆ ಕೇಂದ್ರ ಸಚಿವ ಖೂಬಾ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಗಾಳಿಯಲ್ಲಿ ಗುಂಡು ಹಾರಿಸಿದ್ರು. ಆಗ್ಲೂ ಸಹ ಖುಷಿಯಿಂದ ಗುಂಡು ಹಾರಿಸಿದ್ದಾರೆ ಎಂದು ಹೇಳುವ ಮೂಲಕ ಸಮರ್ಥನೆ ಮಾಡಿಕೊಂಡಿದ್ರು. ಈಗ್ಲೂ ಸಹ ಮತ್ತೆ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!