ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಡೆಯುತ್ತಿರುವ ನಮ್ಮ ಮೆಟ್ರೋ 2ನೇ ಹಂತದ ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗವನ್ನ ಭಾನುವಾರ ಬೆಳಗ್ಗೆ ಉದ್ಘಾಟನೆ ಮಾಡಲಾಗ್ತಿದೆ. 7.5 ಕಿಲೋ ಮೀಟರ್ ಉದ್ದದ ಮೆಟ್ರೋ ಮಾರ್ಗವನ್ನ ಸಿಎಂ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಹರ್ ದೀಪ್ ಸಿಂಗ್ ಪುರಿ ಬೆಳಗ್ಗೆ 10.30ಕ್ಕೆ ಉದ್ಘಾಟನೆ ಮಾಡಲಿದ್ದಾರೆ.
ಕೆಂಗೇರಿ ಬಳಿಯ ಬಸ್ ಟರ್ಮಿನಲ್ ನಿಲ್ದಾಣದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ನೇರಳ ಬಣ್ಣದ ಮಾರ್ಗ ಇದಾಗಿದ್ದು, 7 ನಿಲ್ದಾಣಗಳಿವೆ.