ಜ.6ಕ್ಕೆ ರಾಜ್ಯದಲ್ಲಿ ‘ನಾ ನಾಯಕಿ’ ಮಹಿಳಾ ಸಮೇಶ

200

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: 2023ರ ವಿಧಾನಸಭೆ ಚುನಾವಣೆ ಸಂಬಂಧ ರಾಜಕೀಯ ಪಕ್ಷಗಳ ರ್ಯಾಲಿ, ಸಮಾವೇಶ ಜೋರಾಗಿವೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ನಡೆಸಿರುವ ಕಾಂಗ್ರೆಸ್, ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ‘ನಾ ನಾಯಕಿ’ ಅನ್ನೊ ಸಮಾವೇಶಕ್ಕೆ ಸಜ್ಜಾಗಿದೆ.

ಜನವರಿ 6ರಂದು ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಮಹಿಳಾ ಸಮಾವೇಶವನ್ನು ಹಮ್ಮಿಕೊಂಡಿದೆ. ಇದರಲ್ಲಿ ಭಾಗವಹಿಸುವ ಪ್ರಿಯಾಂಕಾ, ಸಮಾಜದ ಪ್ರತಿಯೊಂದು ಕ್ಷೇತ್ರಗಳಲ್ಲಿ ಮಹಿಳೆ ಸ್ವಾವಲಂಬಿಯಾಗುವ ಜೊತೆಗೆ ನಾಯಕಿ ಆಗುವ ಅವಕಾಶ ಕಲ್ಪಿಸಲಾಗುವುದು. ಹೀಗಾಗಿ ಮಹಿಳೆಯರಿಗಾಗಿ ನಾ ನಾಯಕಿ ಅನ್ನೋ ಸಮಾವೇಶದ ಮೂಲಕ ಜಿಲ್ಲಾ, ತಾಲೂಕು, ಬೂತ್ ಮಟ್ಟದವರೆಗೂ ಅಭಿಯಾನ ನಡೆಸಲಿದೆ.

ಸಮಾವೇಶದ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ರಾಜ್ಯ ನಾಯಕರೊಂದಿಗೆ ಸಮಗ್ರವಾಗಿ ಚರ್ಚಿಸುವ ಮೂಲಕ ಚುನಾವಣೆಯಲ್ಲಿ ಗೆಲುವಿನ ರಣತಂತ್ರವನ್ನು ಹೆಣೆಯಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!