ಆಸ್ಕರ್ ಪ್ರಶಸ್ತಿ ಪಡೆದು ಇತಿಹಾಸ ನಿರ್ಮಿಸಿದ ನಾಟು ನಾಟು ಸಾಂಗ್

234

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ನಿರ್ದೇಶಕ ಎಸ್.ಎಸ್ ರಾಜಮೌಳಿ ಆಕ್ಷನ್ ಕಟ್ ಹೇಳಿದ ಆರ್ ಆರ್ ಆರ್ ಮೂವಿ ಇತಿಹಾಸ ನಿರ್ಮಿಸಿದೆ. ಚಿತ್ರ ಬಿಡುಗಡೆಯಾದ ದಿನದಿಂದ ಹೊಸ ಹೊಸ ದಾಖಲೆಗಳನ್ನು ಬರೆಯುತ್ತಾ ಹೋಗುತ್ತಿರುವ ಚಿತ್ರದ ನಾಟು ನಾಟು ಸಾಂಗ್ ಆಸ್ಕರ್ ಪ್ರಶಸ್ತಿ ಪಡೆಯುವ ಮೂಲಕ ಹೊಸ ದಾಖಲೆ ಬರೆದಿದೆ. ಭಾರತೀಯ ಚಿತ್ರರಂಗದಲ್ಲಿ ಮೊಟ್ಟ ಮೊದಲ ಬಾರಿಗೆ ಆಸ್ಕರ್ ಪ್ರಶಸ್ತಿ ಪಡೆದ ಚಿತ್ರ ಆರ್ ಆರ್ ಆರ್ ಆಗಿದೆ.

ಅತ್ಯುತ್ತಮ ಹಾಡು ವಿಭಾಗದಲ್ಲಿ ನಾಟು ನಾಟು ಆಸ್ಕರ್-2023ರ ಪ್ರಶಸ್ತಿಯನ್ನು ಬಾಚಿಕೊಂಡು ದಾಖಲೆ ನಿರ್ಮಿಸಿದೆ. ಎಂ.ಎಂ ಕೀರವಾಣಿ ಈ ನಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಅವರು ಆಸ್ಕರ್ ಪ್ರಶಸ್ತಿಯನ್ನು ಪಡೆಯುವ ಮೂಲಕ ಭಾರತೀಯರು ಹೆಮ್ಮೆ ಪಡುವಂತೆ ಮಾಡಿದರು.

ನಟರಾದ ಜ್ಯೂನಿಯರ್ ಎನ್ ಟಿಆರ್ ಹಾಗೂ ರಾಮ್ ಚರಣ್ ಈ ಹಾಡಿನಲ್ಲಿ ಸಖತ್ ಸೆಪ್ಟ್ ಹಾಕಿದ್ದು, ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡಿತು. ಈ ಹಾಡು ಇತ್ತೀಚೆಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಪಡೆಯುವ ದಾಖಲೆ ನಿರ್ಮಿಸಿತ್ತು. ಈಗ ಆಸ್ಕರ್ ಪ್ರಶಸ್ತಿಗೆ ಮುತ್ತಿಕ್ಕಿದೆ. ಹೀಗಾಗಿ ಎಲ್ಲಡೆಯಿಂದ ಶುಭಾಶಯಗಳ ಸುರಿಮಳೆ ನಡೆದಿದೆ.

ಆಸ್ಕರ್ ಪ್ರಶಸ್ತಿ ಘೋಷಿಸಿದ ದೀಪಿಕಾ

ಲಾಸ್ ಏಂಜಲ್ಸ್ ನಲ್ಲಿ ನಡೆಯುತ್ತಿರುವ 95ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದು, ಅವರೆ ನಾಟು ನಾಟು ಸಾಂಗ್ ಗೆ ಆಸ್ಕರ್ ಪ್ರಶಸ್ತಿ ಬಂದಿರುವುದನ್ನು ಘೋಷಿಸಿದರು. ಒರಿಜನಲ್ ಸಾಂಗ್ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದಿದ್ದು, ಇದು ಹೆಮ್ಮೆಯ ವಿಷಯ ಎಂದು ದೀಪಿಕಾ ಹೇಳಿದ್ದಾರೆ. ಇನ್ನು ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಭಾರತೀಯ ನಟಿಯೊಬ್ಬರು ಪ್ರಶಸ್ತಿ ಘೋಷಿಸಿದ್ದು ಸಹ ದಾಖಲೆ. ಇತ್ತೀಚೆಗೆ ಫಿಫಾ ಫುಟ್ಬಾಲ್ ವಿಶ್ವಕಪ್ ಸಹ ನಟಿ ದೀಪಿಕಾ ಅನಾವರಣ ಮಾಡುವ ಮೂಲಕ ಸಹ ಹೊಸ ದಾಖಲೆ ನಿರ್ಮಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!