ಶೋಭಾ ಕರಂದ್ಲಾಜೆ ಸೇರಿ ಹಲವರು ಪೊಲೀಸ್ ವಶಕ್ಕೆ

99

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಗರದ ನಗರ್ತಪೇಟೆಯಲ್ಲಿನ ಗಲಾಟೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಮುಖೇಶ್ ಎಂಬಾತನನ್ನು ಪೊಲೀಸರು ಮಂಗಳವಾರ ವಶಕ್ಕೆ ಪಡೆಯುವ ಸಂದರ್ಭದಲ್ಲಿ ಗಲಾಟೆ ನಡೆದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿ ಹಲವರನ್ನು ವಶಕ್ಕೆ ಪಡೆಯಲಾಗಿದೆ.

ಮುಖೇಶನ್ನು ಕರೆದ್ಯೊಯುವ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ಸ್ಥಳಕ್ಕೆ ಬಂದ ಶೋಭಾ ಕರಂದ್ಲಾಜೆ ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿ ಪೊಲೀಸರೊಂದಿಗೆ ಅವರು ಸಹ ವಾಗ್ವಾದ ನಡೆಸಿದರು. ಹೀಗಾಗಿ ಪೊಲೀಸರು ಕರಂದ್ಲಾಜೆ ಸೇರಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣವಿದೆ.

ಸಂಸದ ತೇಜಸ್ವಿಸೂರ್ಯ ಸೇರಿ ಬಿಜೆಪಿ ನಾಯಕರು ನಮಾಜ್ ಹಾಗೂ ಹನುಮಾನ್ ಚಾಲೀಸ್ ಎಂದು ಸುಳ್ಳು ಕಥೆ ಕಟ್ಟಿದ್ದಾರೆ ಎನ್ನುವ ಆರೋಪ ಸಹ ಕೇಳಿ ಬಂದಿದೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧದ ಚರ್ಚೆ ಜೋರಾಗಿದೆ.




Leave a Reply

Your email address will not be published. Required fields are marked *

error: Content is protected !!