ಹಾಲಿನ ದರ 3 ರೂ. ಏರಿಕೆಗೆ ಸಿಎಂ ಬ್ರೇಕ್?

135

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ನಂದಿನ ಹಾಲಿನ ದರ 3 ರೂಪಾಯಿ ಏರಿಕೆ ಸಂಬಂಧ ಮಾತನಾಡಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಈ ತಿಂಗಳು 20ರ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕೆಎಂಎಫ್ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ನಂದಿನಿ ಮಾದರಿಯ ಎಲ್ಲ ಹಾಲು ಹಾಗೂ ಮೊಸರಿನ ದರ ಪ್ರತಿ ಲೀಟರ್ ಗೆ 3 ರೂಪಾಯಿ ಏರಿಕೆ ಮಾಡಲಾಗಿದೆ. ಹೀಗಾಗಿ ಟೋಲ್ ಹಾಲು 37 ರಿಂದ 40 ಆಗಿದೆ. ಹೋಮೋಜಿನೈಸ್ಡ್ ಟೋನ್ಡ್ ಹಾಲು 38ರಿಂದ 41, ಹೋಮೋಜಿನೈಸ್ಡ್ ಹಸುವಿನ ಹಾಲು 42 ರಿಂದ 45, ಸ್ಪೆಷಲ್ ಹಾಲು 43 ರಿಂದ 46, ಶುಭಂ ಹಾಲು 43 ರಿಂದ 46 ರೂಪಾಯಿಗೆ ಏರಿಕೆಯಾಗಿದೆ. ಹೀಗೆ ನಂದಿನಿಯ ವಿವಿಧ ಮಾದರಿಯ ಹಾಲಿನ ದರದಲ್ಲಿ 3 ರೂಪಾಯಿ ಏರಿಕೆಯಾಗಿದೆ.




Leave a Reply

Your email address will not be published. Required fields are marked *

error: Content is protected !!