ನಂದಿನಿ ಹಾಲಿನ ದರ ಏರಿಕೆ?

253

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಜನಸಾಮಾನ್ಯರಿಗೆ ಪ್ರತಿಯೊಂದರ ಬೆಲೆ ಏರಿಕೆ ಬಿಸಿ ತಟ್ಟುತ್ತಲೇ ಇದೆ. ಇದರ ಬಗ್ಗೆ ಸರ್ಕಾರ ಯಾವುದೇ ರೀತಿಯಿಂದ ಚಿಂತನೆ ಮಾಡುತ್ತಿಲ್ಲ. ಹೀಗಿರುವ ಹೊತ್ತಿನಲ್ಲಿ ಕೆಎಂಎಫ್ ಕೂಡಾ ಹಾಲಿನ ದರ ಏರಿಕೆ ಮಾಡುವ ಸಂಬಂಧ ಪ್ರಸ್ತಾವನೆ ಸಲ್ಲಿಸಿದೆ.

ಪ್ರತಿ ಲೀಟರ್ ಹಾಲಿಗೆ ಮೂರು ರೂಪಾಯಿ ಹೆಚ್ಚಳ ಮಾಡಬೇಕು ಎಂದು ಕೆಎಂಎಫ್ ಒಕ್ಕೂಟಗಳು ನಿರಂತರವಾಗಿ ಒತ್ತಡ ಹೇರುತ್ತಿವೆ. ಹೀಗಾಗಿ ಪ್ರತಿ ಲೀಟರ್ ಹಾಲಿಗೆ 40 ರೂಪಾಯಿ ಆಗುತ್ತದೆ. ಈ ಹೊತ್ತಿನಲ್ಲಿ ಹಾಲಿನ ದರ ಏರಿಕೆ ಮಾಡಿದರೆ ಜನರ ವಿರೋಧ ಕಟ್ಟಿಕೊಳ್ಳಬೇಕಾಗುತ್ತೆ ಎನ್ನುತ್ತಿದ್ದಾರೆ.

ಮುಂಬರುವ ಕೆಎಂಎಫ್ ಸಾಮಾನ್ಯ ಸಭೆಯಲ್ಲಿ ದರ ಹೆಚ್ಚಳದ ಬಗ್ಗೆ ಚರ್ಚೆ ನಡೆಯಲಿದೆ. ರಾಜ್ಯದಲ್ಲಿ 14 ಹಾಲು ಒಕ್ಕೂಟಗಳಿವೆ. ಇವುಗಳಿಂದ ನಿತ್ಯ 75 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಬೆಲೆ ಏರಿಕೆಯಿಂದ ಹೈರಾಣಾಗಿರುವ ರೈತರು ಹಾಲು ಖರೀದಿಯ ಬೆಲೆ ಏರಿಕೆಗೆ ಒತ್ತಾಯಿಸಿದ್ದಾರೆ. ಹೀಗಾಗಿ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ.




Leave a Reply

Your email address will not be published. Required fields are marked *

error: Content is protected !!