ಪ್ರಜಾಸ್ತ್ರ ಸುದ್ದಿ
ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಮುಂಬೈನಲ್ಲಿ ಬಿಜೆಪಿ ಮುಖಂಡರು ದೂರು ದಾಖಲಿಸಿದ್ದಾರೆ. ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರಗೀತೆ ಹಾಡುವಾಗ ಕುಳಿತುಕೊಂಡಿದ್ದರು. ನಂತರ ಎದ್ದುನಿಂತುಕೊಂಡು ಅರ್ಧಕ್ಕೆ ನಿಲ್ಲಿಸಿದರು ಎಂದು ದೂರು ನೀಡಿದ್ದಾರೆ.
ರಾಷ್ಟ್ರಗೀತೆಗೆ ಅಗೌರವ ತೋರಿಸಿದ್ದಾರೆ. ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ ಕಾಯ್ದೆ ಅಡಿಯಲ್ಲಿ ಅಪರಾಧವಾಗಿದೆ ಎಂದು ದೂರಿದ್ದಾರೆ. ಈ ಬಗ್ಗೆ ಬಿಜೆಪಿ ಮುಖಂಡರು ಸೋಷಿಯಲ್ ಮೀಡಿಯಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.