60 ಕ್ರೀಡಾ ಸಾಧಕರಿಗೆ ಪ್ರಶಸ್ತಿ ಪ್ರದಾನ

257

ಪ್ರಜಾಸ್ತ್ರ ಕ್ರೀಡಾ ಸುದ್ದಿ

ನವದೆಹಲಿ: 60 ಜನ ಕ್ರೀಡಾ ಸಾಧಕರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇಂದು ಸಂಜೆ ವಿವಿಧ ಕ್ರೀಡಾ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಕೋವಿಡ್ 19ನಿಂದಾಗಿ ಕ್ರೀಡಾ ಪ್ರಶಸ್ತಿ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವರ್ಚ್ಯುಯಲ್ ಸಮಾರಂಭದ ಮೂಲಕ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಹಾಕಿ ಮಾಂತ್ರಿಕ ಧ್ಯಾನಚಂದ್ ಅವರ ಜನ್ಮದಿನದ ಪ್ರಯುಕ್ತ ಆಗಸ್ಟ್ 29ರಂದು ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತೆ. ಹೀಗಾಗಿ ವಿವಿಧ ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ದ್ರೋಣಾಚಾರ್ಯ ಪ್ರಶಸ್ತಿ, ಧ್ಯಾನಚಂದ್ ಪ್ರಶಸ್ತಿ, ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿ ಹಾಗೂ ಅರ್ಜುನ ಪ್ರಶಸ್ತಿಯನ್ನ ನೀಡಲಾಗುತ್ತೆ.

74 ಜನ ಕ್ರೀಡಾ ಸಾಧಕರಿಗೆ ಪ್ರಶಸ್ತಿ ಘೋಷಿಸಲಾಗಿದೆ. 11 ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ವಿವಿಧ ನಗರಗಳ ಮೂಲಕ 60 ಜನರು ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿದ್ರು. 14 ಜನರು ಕೆಲ ಕಾರಣಗಳಿಂದ ಭಾಗವಹಿಸಲು ಆಗಿರ್ಲಿಲ್ಲ. ಖೇಲ್ ರತ್ನ ಪ್ರಶಸ್ತಿ 7.5 ಲಕ್ಷದಿಂದ 25 ಲಕ್ಷಕ್ಕೆ, ಅರ್ಜುನ ಪ್ರಶಸ್ತಿ 10 ಲಕ್ಷದಿಂದ 15ಲಕ್ಷಕ್ಕೆ, ದ್ರೋಣಾಚಾರ್ಯ ಪ್ರಶಸ್ತಿ 5 ಲಕ್ಷದಿಂದ 15 ಲಕ್ಷಕ್ಕೆ ಹಾಗೂ ಧ್ಯಾನಚಂದ ಪ್ರಶಸ್ತಿ 5 ಲಕ್ಷದಿಂದ 10 ಲಕ್ಷಕ್ಕೆ ಏರಿಸಲಾಗಿದೆ.

ಭಾರತದ ಮಾಜಿ ಅಥ್ಲೇಟಿಕ್ ಕೋಚ್ ಪುರುಷೋತ್ತಮ ರಾಯ್ ಅವರಿಗೆ ಈ ಬಾರಿಯ ದ್ರೋಣಾಚಾರ್ಯ ಪ್ರಶಸ್ತಿ ಲಭಿಸಿದೆ. ವಿಧಿಯಾಟಕ್ಕೆ ನಿನ್ನೆ ಹೃದಯಾಘಾತದಿಂದ ನಿಧನರಾಗಿರುವುದು ನಿಜಕ್ಕೂ ದುಃಖದ ಸಂಗತಿ.




Leave a Reply

Your email address will not be published. Required fields are marked *

error: Content is protected !!