ಸಿಧು ರಾಜೀನಾಮೆ ಅಂಗೀಕರಿಸದ ಕಾಂಗ್ರೆಸ್?

199

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಆದರೆ, ಅವರ ರಾಜೀನಾಮೆಯನ್ನು ಕಾಂಗ್ರೆಸ್ ಹೈಕಮಾಂಡ್ ಅಂಗೀಕರಿಲ್ಲವೆಂದು ಹೇಳಲಾಗುತ್ತಿದೆ.

ಈ ಬಗ್ಗೆ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದ್ದು, ಸಿಧು ರಾಜೀನಾಮೆ ಅಂಗೀಕರಿಸದ ಹೈಕಮಾಂಡ್, ಸ್ಥಳೀಯ ಮಟ್ಟದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ಸೂಚಿಸಿದೆಯಂತೆ. ಮುಂದಿನ ವರ್ಷ ಪಂಜಾಬ್ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಹೀಗಿರುವ ಸಂದರ್ಭದಲ್ಲಿ ಕೈ ಪಕ್ಷದ ಒಳ ಜಗಳಗಳು ಸಾಕಷ್ಟು ಸಮಸ್ಯೆ ತಂದೊಡ್ಡುವ ಸಾಧ್ಯತೆಗಳಿವೆ.




Leave a Reply

Your email address will not be published. Required fields are marked *

error: Content is protected !!